ನಾಳೆ ಧರ್ಮಸ್ಥಳ ಭಕ್ತಾಭಿಮಾನಿಗಳಿಂದ ಪ್ರತಿಭಟನೆ
ಕುಂದಗೋಳ :ತಾಲೂಕಿನ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಪರಮಪೂಜ್ಯ ಖಾವಂದರಿಗೆ ಕಳಂಕ ತರಲು ಒಳ ಸಂಚು ನಡೆಸುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭಕ್ತಾಭಿಮಾನಿಗಳಿಂದ ದಿನಾಂಕ 25- 8 – 2025 ರಂದು ಮುಂಜಾನೆ 10 ಗಂಟೆಗೆ ಪಟ್ಟಣದಲ್ಲಿ ಭಾರಿ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭಕ್ತಾಭಿಮಾನಿ ಶಿವಾನಂದ ಬೆಂತೂರ ತಿಳಿಸಿದ್ದಾರೆ….
